*ಮಾಧ್ಯಮ ಮಾಹಿತಿ:*

  • Post author:
  • Post category:Future

*ಮಾಧ್ಯಮ ಮಾಹಿತಿ:*

*ಬೆಂಗಳೂರಿನಲ್ಲಿ ಸಂಚಾರ ದಟ್ಟಣೆ ನಿರ್ವಹಣೆಗೆ ಸಂಬಂಧಿಸಿದಂತೆ ವಿವಿಧ ಇಲಾಖೆಗಳ ಜೊತೆ ಸಮನ್ವಯ ಸಭೆ:*

*ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಸಂಚಾರ ದಟ್ಟಣೆ ನಿರ್ವಹಣೆಗೆ ಸಂಬಂಧಿಸಿದಂತೆ ಒಳಾಡಳಿತ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾದ ಶ್ರೀ ರಜನೀಶ್ ಗೋಯಲ್ ರವರ ಅಧ್ಯಕ್ಷತೆ ಹಾಗೂ ಬಿಬಿಎಂಪಿ ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿ ನಾಥ್ ರವರ ನೇತೃತ್ವದಲ್ಲಿ ವಿವಿಧ ಇಲಾಖೆಗಳ ಸಮನ್ವಯ ಸಭೆ ನಡೆಯಿತು.*

ಸಭೆಯನ್ನು ಉದ್ದೇಶಿಸಿ *ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿ ನಾಥ್ ರವರು ಮಾತನಾಡಿ,* ಬಿಬಿಎಂಪಿ ವ್ಯಾಪ್ತಿಯಲ್ಲಿ ಸಂಚಾರ ದಟ್ಟಣೆ ನಿಯಂತ್ರಿಸುವ ನಿಟ್ಟಿನಲ್ಲಿ ಹಲವಾರು ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದ್ದು, ನಗರದ ಹೊರ ವರ್ತುಲ ರಸ್ತೆ(ORR)ಗಳ ಸರ್ವೀಸ್ ರಸ್ತೆಗಳಲ್ಲಿ ವಾಹನಗಳನ್ನು ಪಾರ್ಕಿಂಗ್ ಮಾಡದಂತೆ ಸೂಕ್ತ ಕ್ರಮಗಳನ್ನು ಕೈಗೊಳ್ಳಲು ಸಂಚಾರಿ ಪೊಲೀಸ್ ಇಲಾಖೆಗೆ ಸೂಚನೆ ನೀಡಿದರು.

ನಗರದ ಹೊರ ವರ್ತುಲ ರಸ್ತೆ(ORR)ಗಳ ಸರ್ವೀಸ್ ರಸ್ತೆಗಳಲ್ಲಿ ವಾಹನಗಳನ್ನು ಪಾರ್ಕಿಂಗ್ ಮಾಡಿರುತ್ತಾರೆ. ಇದರಿಂದ ಸರ್ವೀಸ್ ರಸ್ತೆಗಳಲ್ಲಿ ವಾಹನ ಸಂಚಾರಕ್ಕೆ ಸಮಸ್ಯೆ ಆಗಲಿದೆ. ಈ ಸಂಬಂಧ ಹೊರವರ್ತುಲ ರಸ್ತೆಗಳ ಸರ್ವೀಸ್ ರಸ್ತೆಗಳಲ್ಲಿ ವಾಹನಗಳನ್ನು ನಿಲ್ಲಿಸಲು ಅವಕಾಶ ನೀಡಬಾರದು ಹಾಗೂ ಸಂಚಾರಿ ಪೊಲೀಸ್ ವಿಭಾಗ ಹಾಗೂ ಪಾಲಿಕೆ ಸಹಯೋಗದಲ್ಲಿ *ನೋ ಫಾರ್ಕಿಂಗ್* ನಾಮಫಲಕಗಳನ್ನು ಅಳವಡಿಸಲು ಅಧಿಕಾರಿಗಳಿಗೆ ಸೂಚಿಸಿದರು.

*ಕೋಲ್ಡ್ ಮಿಕ್ಸ್ ಬಳಸಿ ರಸ್ತೆ ಗುಂಡಿಗ